ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿಯಿಂದ ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರಪತಿಗೆ 2 ಕೋಟಿ ಸಹಿ ಪತ್ರ ಸಲ್ಲಿಕೆ

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಾಂಗ್ರೆಸ್ ಗುರುವಾರ ಪ್ರತಿಭಟನೆ ನಡೆಸುತ್ತಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿಜಯ್ ಚೌಕ್‌ನಲ್ಲಿ ನಡೆಯುವ ಪ್ರತಿಭನೆಯ ನೇತೃತ್ವ ವಹಿಸಲಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಾಂಗ್ರೆಸ್ ಗುರುವಾರ ಪ್ರತಿಭಟನೆ ನಡೆಸುತ್ತಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿಜಯ್ ಚೌಕ್‌ನಲ್ಲಿ ನಡೆಯುವ ಪ್ರತಿಭನೆಯ ನೇತೃತ್ವ ವಹಿಸಲಿದ್ದಾರೆ.

ನಾಳೆ ವಿಜಯ್ ಚೌಕ್‌ ನಿಂದ ರಾಷ್ಟ್ರಪತಿ ಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದು, ಮೂರು ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ರದ್ದುಗೊಳಿಸಲು ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಎರಡು ಕೋಟಿ ಸಹಿಯುಳ್ಳ ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೇಶಾದ್ಯಂತ ಹೊಸ ಕಾನೂನುಗಳನ್ನು ಮೊದಲಿನಿಂದಲೂ ವಿರೋಧಿಸುತ್ತಿರುವ ರೈತರು, ಕಾರ್ಮಿಕರು ಮತ್ತು ಭಾಗೀದಾರರ ಸಹಿಗಳನ್ನು ಕಾಂಗ್ರೆಸ್ ಸಂಗ್ರಹಿಸಿದೆ.

ತೀವ್ರ ಚಳಿಯಲ್ಲೂ ಕಳೆದ ಒಂದು ತಿಂಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಮತ್ತು ನಾಯಕರ ನಿಯೋಗ ಸಂಸತ್ ಭವನದ ಬಳಿ ಇರುವ ವಿಜಯ್ ಚೌಕ್‌ನಿಂದ ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!