ದೇಶ

ಪಶ್ಚಿಮ ಬಂಗಾಳ ಚುನಾವಣೆಗಾಗಿ ಎಡಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ: ಅಧೀರ್ ರಂಜನ್ ಚೌಧರಿ

Nagaraja AB

ಕೊಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಾಗಿ ಎಡಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿಗೆ ಇಂದು ಹೈಕಮಾಂಡ್ ಔಪಚಾರಿಕವಾಗಿ ಅನುಮೋದನೆ ನೀಡಿರುವುದಾಗಿ ಅಧೀರ್ ರಂಜನ್ ಚೌಧರಿ ಟ್ವೀಟ್ ಮಾಡಿದ್ದಾರೆ.

ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಂಗಾಳ ಘಟಕದ ನಿರ್ಧಾರಕ್ಕೆ ಕಳೆದ ವಾರ ಸಿಪಿಐ(ಎಂ) ಕೇಂದ್ರ ಸಮಿತಿ ಅನುಮೋದನೆ ನೀಡಿತ್ತು.

1964ರಲ್ಲಿ ಸ್ಥಾಪನೆಯಾಗಿರುವ ಸಿಪಿಐ (ಎಂ) ಕಳೆದ ವರ್ಷ ನಡೆದ ಸಂಸತ್ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಸ್ಥಾನ ಕೂಡಾ ಗೆದ್ದಿರಲಿಲ್ಲ.

SCROLL FOR NEXT