ಹೊಸ ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೈತರ ಒಕ್ಕೂಟ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ (ಲೋಕ್ ಶಕ್ತಿ) ಮೂರು ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ವಿಷಯವನ್ನು ಕೈಗೆತ್ತಿಕೊಳ್ಳಬೇಕೆಂದು ರೈತರ ಒಕ್ಕೂಟ ಮನವಿ ಮಾಡಿದೆ. ಹೊಸ ಕೃಷಿ ಕಾಯ್ದೆಗಳು ಕಾರ್ಪೊರೇಟ್ ಹಿತಾಸಕ್ತಿಯನ್ನು ಉತ್ತೇಜಿಸುತ್ತದೆಯೇ ಹೊರತು ರೈತರ ಹಿತಾಸಕ್ತಿಯ ಬಗ್ಗೆ ಗಮನ ಹರಿಸುವುದಿಲ್ಲ ಎಂದು ರೈತರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.
ಎಪಿ ಸಿಂಗ್ ಮೂಲಕ ರೈತರು ಅರ್ಜಿ ಸಲ್ಲಿಸಿದ್ದು, ಕಾಯ್ದೆ, ಸಾಂವಿಧಾನಿಕ ವಿರೋಧಿಯಾಗಿದ್ದು, ಎಪಿಎಂಸಿ ವ್ಯವಸ್ಥೆಯನ್ನೇ ಕುಸಿಯುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೃಷಿ ಕಾಯ್ದೆಯನ್ನು ಈಗಿನ ಸ್ವರೂಪದಲ್ಲಿಯೇ ಜಾರಿಗೆ ತಂದಲ್ಲಿ ರೈತ ಸಮುದಾಯಕ್ಕೇ ಅಪಾಯಕಾರಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.