27ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ 
ದೇಶ

ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿ

ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,...

ಚಂಡೀಗಢ: ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು, ಅದಕ್ಕೆ ನೀವೇ ದಿನಾಂಕ ಮತ್ತು ಸಮಯ ನಿಗದಿಪಡಿಸುವಂತೆ ಗುರುವಾರ ಚೆಂಡನ್ನು ರೈತರ ಅಂಗಳಕ್ಕೆ ಎಸೆದಿದೆ.

ಈ ಸಂಬಂಧ ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಅವರು 40 ರೈತ ಸಂಘಟನೆಗಳಿಗೆ ಪತ್ರ ಬರೆದಿದ್ದು, ನೀವು ಚರ್ಚಿಸಲು ಬಯಸುವ ಸಮಸ್ಯೆಗಳ ಬಗ್ಗೆ ವಿವರ ನೀಡುವಂತೆ ಕೇಳಿಕೊಂಡಿದ್ದಾರೆ.

ಸರ್ಕಾರ ಸ್ಪಷ್ಟ ಉದ್ದೇಶ ಮತ್ತು ಮುಕ್ತ ಮನಸ್ಸಿನಿಂದ ಪ್ರತಿಭಟನೆಯನ್ನು ಅಂತ್ಯಗೊಳಿಸಲು ನಿಮ್ಮೊಂದಿಗೆ ಮತ್ತೆ ಮಾತುಕತೆ ನಡೆಸಲು ಸಿದ್ಧವಿದೆ. ಮಾತುಕತೆಯ ದಿನಾಂಕ ಮತ್ತು ಸಮಯವನ್ನು ತಿಳಿಸುವಂತೆ ಅಗರ್ವಾಲ್ ಅವರು ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.

ಸರ್ಕಾರ ಪ್ರತಿಭಟನಾನಿರತ ರೈತ ಸಂಘಟನೆಗಳು ಎತ್ತಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ