ಕೋವಿಡ್-19: ದೇಶದಲ್ಲಿಂದು 24,712 ಹೊಸ ಕೇಸ್ ಪತ್ತೆ, 312 ಮಂದಿ ಸಾವು
ದೇಶದಲ್ಲಿಂದು 24,712 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 312 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ನವದೆಹಲಿ: ದೇಶದಲ್ಲಿಂದು 24,712 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 312 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,23,778ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,46,756ಕ್ಕೆ ತಲುಪಿದೆ ಎಂದು ತಿಳಿಸಿದೆ.
ಈ ನಡುವೆ ಒಟ್ಟಾರೆ 1,01,23,778 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 29,791 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 96,93,173ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,83,849 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ಒಂದೇ ದಿನ 11,13,406 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,89,18,646 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.