ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಜೀವ ಬೆದರಿಕೆ, ಪೊಲೀಸ್ ಭದ್ರತೆ

ಉತ್ತರ ಪ್ರದೇಶ ಸರ್ಕಾರ ಹೊಸದಾಗಿ ಜಾರಿಗೆತಂದ ಮತಾಂತರ ನಿಷೇಧ ಕಾಯಿದೆ ಅಡಿ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದು, ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಜೀವ ಬೆದರಿಕೆ...

ಲಖನೌ: ಉತ್ತರ ಪ್ರದೇಶ ಸರ್ಕಾರ ಹೊಸದಾಗಿ ಜಾರಿಗೆತಂದ ಮತಾಂತರ ನಿಷೇಧ ಕಾಯಿದೆ ಅಡಿ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದು, ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಜೀವ ಬೆದರಿಕೆ ಎದುರಿಸುತ್ತಿರುವ ವ್ಯಕ್ತಿಗೆ ಅಲಿಗಢ ಪೊಲೀಸರು ಭದ್ರತೆ ನೀಡಿದ್ದಾರೆ.

ಮೂಲಗಳ ಪ್ರಕಾರ, ಖಾಸಿಂ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಮಕ್ಕಳೊಂದಿಗೆ ಡಿಸೆಂಬರ್ 20ರಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತಮ್ಮ ಹೆಸರನ್ನು ಕರಮ್‌ವೀರ್ ಎಂದು ಬದಲಾಯಿಸಿಕೊಂಡಿದ್ದಾರೆ. ಮತಾಂತರವಾದಾಗಿನಿಂದ, ಕರಮ್ ವೀರ್ ಮತ್ತು ಅವರ ಕುಟುಂಬ ಜೀವ ಬೆದರಿಕೆ ಕರೆಗಳು ಬರುತ್ತಿವೆ.

ಡಿಸೆಂಬರ್ 20 ರಂದು ಸ್ಥಳೀಯ ಆರ್ಯ ಸಮಾಜದ ದೇವಸ್ಥಾನವೊಂದರಲ್ಲಿ ವೇದ ಆಚರಣೆಗಳ ಮೂಲಕ ಸನಾತನ ಧರ್ಮವನ್ನು ಸ್ವೀಕರಿಸಿದ್ದೇನೆ. ಇದು ನನಗೆ ‘ಘರ್ ವಾಪಸಿ’(ಮನೆಗೆ ಬರುವ) ಎಂದು ಕರಮ್‌ವೀರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ನಾನು ಮತಾಂತರಗೊಂಡ ನಂತರ, ನನಗೆ ಮತ್ತು ನನ್ನ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನನ್ನ ಮನೆಗೆ ಹೋಗಲು ಸಾಧ್ಯವಾಗದ ಕಾರಣ ನನಗೆ ಪೊಲೀಸ್ ರಕ್ಷಣೆ ಬೇಕು. ನನ್ನ ಹಿಂದಿನ ಸಮುದಾಯದ(ಇಸ್ಲಾಂ) ಅನೇಕ ಸದಸ್ಯರು ಇಸ್ಲಾಂ ಧರ್ಮವನ್ನು ಪುನಃ ಅಳವಡಿಸಿಕೊಳ್ಳಲು ನನಗೆ ಹಣದ ಆಮಿಷ ನೀಡುತ್ತಿದ್ದಾರೆ. ಆದರೆ ನಾನು ಅವರ ಪ್ರಸ್ತಾಪವನ್ನು ತಿರಸ್ಕರಿಸಿದಾಗ, ಅವರು ಈಗ ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಕರಮ್‌ವೀರ್ ಆರೋಪಿಸಿದ್ದಾರೆ.

ಈ ಸಂಬಂಧ ಕರಮ್ ವೀರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತಾಂತರಗೊಂಡ ವ್ಯಕ್ತಿಯ ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT