ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಹೈದರಾಬಾದ್: ಅಧಿಕ ರಕ್ತದೊತ್ತಡ ಕಾರಣ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಅಧಿಕ ರಕ್ತದೊತ್ತಡದಿಂದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೈದರಾಬಾದ್: ಅಧಿಕ ರಕ್ತದೊತ್ತಡದಿಂದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಜನಿಕಾಂತ್ ಅವರು ನಟಿಸುತ್ತಿರುವ ಅನ್ನತ್ತೆ ಚಿತ್ರತಂಡದಲ್ಲಿ ಹಲವರಿಗೆ ಕೋವಿಡ್-19 ಪಾಸಿಟಿವ್ ಬಂದಿತ್ತು, ರಜನಿಕಾಂತ್ ಅವರನ್ನು ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್ ಬಂದಿತ್ತು.

ರಜನಿಕಾಂತ್ ಅವರು ದಾಖಲಾಗಿರುವ ಅಪೊಲೊ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆ ಆಸ್ಪತ್ರೆಗೆ ರಜನಿಕಾಂತ್ ಅವರು ದಾಖಲಾಗಿದ್ದಾರೆ. ಕಳೆದ 10 ದಿನಗಳಿಂದ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣ ಸೆಟ್ ನಲ್ಲಿ ಕೆಲವರಿಗೆ ಪಾಸಿಟಿವ್ ಬಂದಿತ್ತು. ಕಳೆದ 22ರಂದು ಪರೀಕ್ಷೆ ಮಾಡಿಸಿದ್ದಾಗ ರಜನಿಕಾಂತ್ ಅವರಿಗೆ ಕೊರೋನಾ ನೆಗೆಟಿವ್ ಬಂದಿತ್ತು. ಆದರೂ ಅವರು ಸ್ವ ನಿರ್ಬಂಧವಿಧಿಸಿ ಪ್ರತ್ಯೇಕವಾಗಿದ್ದರು. ಕೋವಿಡ್-19ನ ಲಕ್ಷಣ ಅವರಲ್ಲಿ ಕಂಡುಬರದಿದ್ದರೂ ಕೂಡ ಅವರ ರಕ್ತದೊತ್ತಡದಲ್ಲಿ ವಿಪರೀತ ಏರುಪೇರು ಆಗುತ್ತಿದೆ. ಅವರನ್ನು ಇನ್ನಷ್ಟು ಪರೀಕ್ಷೆಗೊಳಪಡಿಸುವ ಅಗತ್ಯವಿದೆ, ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಉಳಿದೆಲ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT