ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ, ಓರ್ವ ಸಾವು

ಪಶ್ಚಿಮ ದೆಹಲಿಯ ಮಾಯಾಪುರಿಯಲ್ಲಿರುವ ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಪಶ್ಚಿಮ ದೆಹಲಿಯ ಮಾಯಾಪುರಿಯಲ್ಲಿರುವ ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಇಂದು ಬೆಳಗ್ಗೆ 3.50ರ ಸುಮಾರಿಗೆ ನಮಗೆ ಕರೆ ಬಂದಿತ್ತು. ತಕ್ಷಣ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಿ, ಬೆಂಕಿ ನಂದಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳು ಕಾರ್ಖಾನೆಯ ಬಾಗಿಲು ಮುರಿದು ಮೂವರನ್ನು ರಕ್ಷಿಸಿದ್ದಾರೆ, ಅವರಲ್ಲಿ ಒಬ್ಬರು ಪ್ರಜ್ಞಾಹೀನರಾಗಿದ್ದಾರೆ. ಕೂಡಲೇ ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

ಈ ಸಂಬಂಧ ಕಾರ್ಖಾನೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT