ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಇಂದು 2,854 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, ಬ್ರಿಟನ್ ನಿಂದ ಬಂದಿದ್ದ 16 ಮಂದಿಯಲ್ಲೂ ಸೋಂಕು!

ಮಾರಕ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದರೂ, ಬ್ರಿಟನ್ ವೈರಸ್ ಭೀತಿ ಬೆನ್ನಲ್ಲೇ ಇಂದು ಮತ್ತೆ 2,854 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಮುಂಬೈ: ಮಾರಕ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದರೂ, ಬ್ರಿಟನ್ ವೈರಸ್ ಭೀತಿ ಬೆನ್ನಲ್ಲೇ ಇಂದು ಮತ್ತೆ 2,854 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಹೌದು.. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 2,854 ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ಮಂದಿ ಸೋಂಕಿತರು ಬ್ರಿಟನ್ ನಿಂದ ಆಗಮಿಸಿದ್ದ ಪ್ರಯಾಣಿಕರಾಗಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 19,16,236ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ  ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ಈ ಪೈಕಿ ಇಂದು 1,526 ಮಂದಿ ಸೋಂಕಿತರು ಗುಣಮುಖರಾಗಿ ಒಟ್ಟಾರೆ 18,07,824 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಲ್ಲದೆ ಇಂದು 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 58,091 ಸಕ್ರಿಯ ಪ್ರಕರಣಗಳಿವೆ ಎಂದು  ಇಲಾಖೆ ಸ್ಪಷ್ಟಪಡಿಸಿದೆ.

ಬ್ರಿಟನ್ ನಿಂದ ಇಂದು ಕೂಡ ಮಹಾರಾಷ್ಟ್ರಕ್ಕೆ ಬಂದವರ ಪೈಕಿ 1122 ಮಂದಿಯನ್ನು ಆರ್ ಟಿ ಪಿಸಿಆರ್ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ 16 ಮಂದಿ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ. ಅಂತೆಯೇ ಸೋಂಕು ಪತ್ತೆಯಾದವರ ಮಾದರಿಯನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಟೂಟ್ ಆಫ್ ವೈರಾಲಜಿಗೆ  ಕಳುಹಿಸಲಾಗಿದ್ದು. ಅವರಲ್ಲಿ ಕಾಣಿಸಿಕೊಂಡಿರುವ ಸೋಂಕು ಹೊಸ ರೂಪಾಂತರಿತ ಕೊರೋನಾ ವೈರಸ್ ನದ್ದೇ ಎಂದು ಪರೀಕ್ಷಿಸಲಾಗುತ್ತಿದೆ.  

ಇತ್ತ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 536 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,90,336ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 463 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ 2,70,135 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಂದು  ಮುಂಬೈನಲ್ಲಿ 12 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 11,068ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರಸ್ತುತ 8,279 ಸಕ್ರಿಯ ಪ್ರಕರಣಗಳಿವೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ.  

ಬ್ರಿಟನ್ ನಲ್ಲಿ ಹೊಸ ಮಾದರಿಯ ರೂಪಾಂತರಿತ ಕೊರೋನಾ ವೈರಸ್ ಪತ್ತೆಯಾದ ಬೆನ್ನಲ್ಲೇ ದೇಶಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಆಯಾ ರಾಜ್ಯಗಳು ಬ್ರಿಟನ್ ನಿಂದ ಆಗಮಿಸಿದವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!