ಸಂಗ್ರಹ ಚಿತ್ರ 
ದೇಶ

ಶೋಪಿಯಾನ್ ಎನ್ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಮುಖಾಮುಖಿ ಗುಂಡಿನ ದಾಳಿಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಮತ್ತೋರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಮುಖಾಮುಖಿ ಗುಂಡಿನ ದಾಳಿಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಮತ್ತೋರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು.

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಕೂಡಲೇ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಈ ಹಿಂದೆ ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. ಇದೀಗ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರ ದಾಳಿಗೆ ಭದ್ರತಾಪಡೆಗಳು ದಿಟ್ಟ ಉತ್ತರವನ್ನು ನೀಡುತ್ತಿವೆ. 

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಇದ್ರೇಶ್ವರ್ ನಗರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನಾಪಡೆಯ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನಾಪಡೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT