ದೇಶ

ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿ!

Srinivasamurthy VN

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ರೈತರು ಪ್ರತಿಭಟನೆ ಸತತ 2ನೇ ತಿಂಗಳಿಗೆ ಕಾಲಿಟ್ಟಿದ್ದು, ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ  ವೈಯುಕ್ತಿಕ ವಿದೇಶ ಪ್ರವಾಸದಲ್ಲಿದ್ದಾರೆ. ಶೀಘ್ರವೇ ದೇಶಕ್ಕೆ ಮರಳಲಿದ್ದಾರೆ ಎಂದು ಹೇಳಿದೆ.

ಅಂತೆಯೇ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಕಾಂಗ್ರೆಸ್ ಪಕ್ಷ ಸಂಸ್ಥಾಪನಾ ದಿನದ ಕಾರ್ಯಕ್ರಮಕ್ಕೂ ಗೈರಾಗಲಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತಂತ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲ ಅವರು, ರಾಹುಲ್ ಗಾಂಧಿ ಸಣ್ಣ ವಿದೇಶ ಪ್ರವಾಸದಲ್ಲಿದ್ದಾರೆ. ಶೀಘ್ರದಲ್ಲೇ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಆದರೆ ರಾಹುಲ್ ಗಾಂಧಿ ಎಲ್ಲಿಗೆ ತೆರಳಿದ್ದಾರೆ ಎಂಬುದರ ಕುರಿತು ಸುರ್ಜೇವಾಲ ಮಾಹಿತಿ ನೀಡಿಲ್ಲ. ಆದರೆ ರಾಹುಲ್ ಗಾಂಧಿ  ವಿದೇಶ ಪ್ರವಾಸದ ಕುರಿತು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದ್ದು, ರಾಹುಲ್ ಖಾಸಗಿ ವಿಮಾನದ ಮೂಲಕ ಮಿಲಾನ್ ಗೆ ತೆರಳಿದ್ದು, ಅಲ್ಲಿ ತಮ್ಮ ಅಜ್ಜಿಯನ್ನು ಭೇಟಿ ಮಾಡಲು ತೆರಳಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರ ಅಜ್ಜಿ ಇಟಲಿಯಲ್ಲಿದ್ದಾರೆ.

SCROLL FOR NEXT