ಜೆಪಿ ನಡ್ಡಾ 
ದೇಶ

ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ: ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಪ್ರಕಟಿಸಿದ ಜೆಪಿ ನಡ್ಡಾ 

ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.

ನವದೆಹಲಿ: ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.

ಲೋಕಸಭೆಯಲ್ಲಿ ಕೃಷಿ ಮಸೂದೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಈ ಕೃಷಿ ಕಾಯ್ದೆಗಳಿಂದಾಗಿ ರೈತರಿಗೆ ಮಧ್ಯವರ್ತಿಗಳಿಂದ ಮುಕ್ತಿ ದೊರೆಯಲಿದ್ದು, ತಮ್ಮ ಉತ್ಪನ್ನಗಳನ್ನು ಉದ್ಯಮಿಗಳಿಗೆ ನೇರವಾಗಿ ಮಾರಾಟ ಮಾಡಬಹುದು ಎಂದು ಹೇಳಿರುವುದು ಕಂಡುಬಂದಿದೆ. 

ಈಗ ಕೃಷಿ ಕಾಯ್ದೆಯನ್ನು ವಿರೋಧಿಸುತ್ತಿರುವ ರೈತರನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಇದೇ ವಿಷಯವನ್ನಿಟ್ಟುಕೊಂಡು ಆರೋಪ ಮಾಡಿರುವ ಜೆಪಿ ನಡ್ಡಾ, ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ ಎಂದು ಆರೋಪಿಸಿದ್ದಾರೆ. 

"ರೈತರ ಪ್ರತಿಭಟನೆಯ ವಿಷಯದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಾಣ ಮಾಡುತ್ತಿದ್ದಾರೆ ಎಂದು ನಡ್ಡಾ ಆರೋಪಿಸಿದ್ದಾರೆ.

ರಾಹುಲ್ ಜೀ ಇದೇನು ಮ್ಯಾಜಿಕ್ ನಡೆಯುತ್ತಿದೆ, ಈ ಹಿಂದೆ ನೀವೇ ಒಪ್ಪಿದ್ದನ್ನು ಈಗ ನೀವೇ ವಿರೋಧಿಸುತ್ತಿದ್ದೀರಿ, ನಿಮಗೆ ದೇಶದ, ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಏನೂ ಆಗಬೇಕಿಲ್ಲ, ನಿಮಗೆ ಕೇವಲ ರಾಜಕಾರಣವಷ್ಟೇ ಮಾಡಬೇಕಿದೆ. ದೇಶದ ಜನತೆಗೆ, ರೈತರಿಗೆ ನಿಮ್ಮ ದ್ವಿಮುಖ ನೀತಿ ಅರ್ಥವಾಗಿದೆ ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT