ದೇಶ

ದೆಹಲಿ ಪಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ಅರುಣ್‌ ಜೇಟ್ಲಿ ಪ್ರತಿಮೆ ಅನಾವರಣಗೊಳಿಸಿದ ಅಮಿತ್‌ ಶಾ

Lingaraj Badiger

ನವದೆಹಲಿ: ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಶಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.

ಈ ಕುರಿತು ಟ್ವೀಟ್‌ ಮಾಡಿದ ಅವರು, ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಅರುಣ್ ಜೇಟ್ಲಿ ಜಿ ಅವರಕೊಡುಗೆಯನ್ನು ಎಂದಿಗೂ ಮರೆಯಲಾಗದು. ರಾಷ್ಟ್ರದ ಪ್ರಗತಿಗೆ ತಮ್ಮ ಜೀವನವನ್ನು ಮೀಸಲಿರಿಸಿದ್ದ ಅವರ ಕೊರತೆ ಕಾಡುತ್ತಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ, ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟಿಗ ಶಿಖರ್ ಧವನ್, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿ ಉಪಸ್ಥಿತರಿದ್ದರು.

ಜೇಟ್ಲಿ ಅವರ ಸ್ಮರಣಾರ್ಥ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣವನ್ನು ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ.

SCROLL FOR NEXT