ದೇಶ

ಕೋವಿಡ್-19 ಹೊಸ ಮಾರ್ಗಸೂಚಿ ಬಿಡುಗಡೆ, ರೂಪಾಂತರಿ ಕೊರೋನಾ ಬಗ್ಗೆ ಜಾಗೃತಿ ಅಗತ್ಯ ಎಂದ ಕೇಂದ್ರ

Lingaraj Badiger

ನವದೆಹಲಿ: ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಜಾಗತಿಕವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ಬ್ರಿಟನ್ ನಲ್ಲಿ ಹೊರ ರೂಪಾಂತರಿ ಕೊರೋನಾ ಪತ್ತೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅವಶ್ಯಕತೆಯಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ರೂಪಾಂತರಿ ಕೊರೋನಾ ಕಣ್ಗಾವಲುಗಾಗಿ ಕೇಂದ್ರ ಗೃಹ ಸಚಿವಾಲಯ ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

"ಅಂತೆಯೇ, ಕಂಟೈನ್ ಮೆಂಟ್ ಜೋನ್ ಗಳಲ್ಲಿ ನಿಗದಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ ಮತ್ತು ವಿವಿಧ ಅನುಮತಿ ನೀಡಿದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಚಿಸಲಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿಗಳು) ಪಾಸಿಸಬೇಕು ಎಂದು ಗೃಹ ಸಚಿವಾಲಯ ಹೇಳಿದೆ.

SCROLL FOR NEXT