ದೇಶ

ಭಾರತದ ಪ್ರಪ್ರಥಮ ಚಾಲಕರಹಿತ ಮೆಟ್ರೋ ರೈಲುಸೇವೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಚಾಲನೆ

ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ನವದೆಹಲಿ: ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ ರೈಲಿನ ಉದ್ಘಾಟನಾ ಕಾರ್ಯಕ್ರಮ ಮತ್ತು ವಿಮಾನ ನಿಲ್ದಾಣ ಎಕ್ಸ್‌ಪ್ರೆಸ್ ಮಾರ್ಗದಲ್ಲಿ ಸಂಪೂರ್ಣ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಾಮಾನ್ಯ ಚಲನಶೀಲತೆ ಕಾರ್ಡ್(ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್)ಕಾರ್ಯಕ್ರಮವನ್ನು  ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

"ಮೊದಲ ಚಾಲಕರಹಿತ ಮೆಟ್ರೋ ರೈಲಿನ ಉದ್ಘಾಟನೆಯು ಭಾರತವು ಸ್ಮಾರ್ಟ್ ವ್ಯವಸ್ಥೆಗಳತ್ತ ಎಷ್ಟು ವೇಗವಾಗಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಅಟಲ್ ಜೀಪ್ರಯತ್ನದಿಂದ ದೇಶದ ಮೊದಲ ಮೆಟ್ರೋವನ್ನು ಪ್ರಾರಂಭಿಸಲಾಯಿತು. 2014 ರಲ್ಲಿ ನಮ್ಮ ಸರ್ಕಾರ ರಚನೆಯಾದಾಗ ಕೇವಲ 5 ನಗರಗಳು ಮಾತ್ರ ಮೆಟ್ರೋ ಸೇವೆಗಳನ್ನು ಹೊಂದಿದ್ದವು ಮತ್ತು ಇಂದು 18 ನಗರಗಳು ಮೆಟ್ರೋ ಸಪುಲಭ್ಯ ಪಡೆದಿವೆ,. ಅಲ್ಲದೆ 2025 ರ ಹೊತ್ತಿಗೆ ನಾವು ಈ ಸೇವೆಯನ್ನು 25 ಕ್ಕೂ ಹೆಚ್ಚು ನಗರಗಳಿಗೆ ವಿಸ್ತರಿಸುವ ಗುರಿ ಹಾಕಿಕೊಂಡಿದ್ದೇವೆ.

"ಮೆಟ್ರೊ ಸೇವೆಗಳ ವಿಸ್ತರಣೆಗೆ "ಮೇಕ್ ಇನ್ ಇಂಡಿಯಾ" ಬಹಳ ಮುಖ್ಯ ವೇದಿಕೆಯಾಗಿದೆ. ಇದು ವೆಚ್ಚವನ್ನು ಕಡಿಮೆ ಮಾಡುತ್ತದೆ, ವಿದೇಶಿ ಕರೆನ್ಸಿಯನ್ನು ಉಳಿಸುತ್ತದೆ ಮತ್ತು ಭಾರತೀಯ ಜನರಿಗೆ ಹೆಚ್ಚಿನ ಉದ್ಯೋಗವನ್ನು ನೀಡುತ್ತದೆ "ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT