ದೇಶ

ವಿದೇಶ ಪ್ರವಾಸದಲ್ಲಿ ರಾಹುಲ್ ಗಾಂಧಿ: ಸ್ಪಷ್ಟನೆ ನೀಡಿದ ಕಾಂಗ್ರೆಸ್

Manjula VN

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆಂದು ಹೇಳಲಾಗುತ್ತಿದ್ದು, ಈ ಕುರಿತು ಕಾಂಗ್ರೆಸ್ ಸೋಮವಾರ ಸ್ಪಷ್ಟನೆ ನೀಡಿದೆ. 

ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ರಾಹುಲ್ ವಿದೇಶ ಪ್ರವಾಸದಲ್ಲಿದ್ದು, ಶೀಘ್ರದಲ್ಲೇ ದೇಶಕ್ಕೆ ಮರಳಲಿದ್ದಾರೆಂದು ಹೇಳಿದ್ದಾರೆ. 

ರಾಹುಲ್ ಗಾಂಧಿಯವರು ವೈಯಕ್ತಿಕ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಆಗಲಿದ್ದಾರೆಂದು ತಿಳಿಸಿದ್ದಾರೆ. ಆದರೆ, ಯಾವ ರಾಷ್ಟ್ರಕ್ಕೆ ಪ್ರವಾಸಕ್ಕೆ ತೆರಳಿದ್ದಾರೆಂಬ ಮಾಹಿತಿಯನ್ನು ಬಹಿರಂಗಪಡಿಸಲು ಸುರ್ಜೇವಾಲಾ ನಿರಾಕರಿಸಿದ್ದಾರೆ. 

SCROLL FOR NEXT