ದೇಶ

ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ 

Srinivas Rao BV

ನವದೆಹಲಿ: ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ. 

ಡಿ.29 ರಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರಾಘವ್ ಛಡ, ರೈತರಿಗೆ ಉಚಿತ ವೈಫೈ ವ್ಯವಸ್ಥೆ ಕಲ್ಪಿಸಲು ರೈತರ ಸೇವಾದಾರ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ರೈತರು ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿರುವುದನ್ನು ನಾವು ಬಯಸುತ್ತೇವೆ. ಆದ್ದರಿಂದ ವೈಫೈ ಹಾಟ್ ಸ್ಪಾಟ್ ಗಳನ್ನು ಸ್ಥಾಪಿಸುವುದಕ್ಕೆ ಕೆಲವು ಪ್ರದೇಶಗಳನ್ನು ಗುರುತಿಸಿದ್ದೇವೆ, ಇದು ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಉಪಕ್ರಮವಾಗಿದೆ ಎಂದು ರಾಘವ್ ಛಡ ತಿಳಿಸಿದ್ದು ಬೇಡಿಕೆ ಹೆಚ್ಚಿದರೆ ಇನ್ನಷ್ಟು ವೈಫೈ ಸ್ಪಾಟ್ ಗಳನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ. 

ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಕಾನೂನುಗಳನ್ನು ವಿರೋಧಿಸಿ ಒಂದು ತಿಂಗಳಿನಿಂದ ಪಂಜಾಭ್-ಹರ್ಯಾಣ ಭಾಗದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಬೆಂಬಲ ದೊರೆತಿದೆ.

SCROLL FOR NEXT