ಭೀಕರ ದೃಶ್ಯ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ, ವಿಡಿಯೋ ಮಾಡುವುದರಲ್ಲಿ ಸ್ಥಳೀಯರು ಬ್ಯುಸಿ!
ಉತ್ತರಪ್ರದೇಶದಲ್ಲಿ ಹಾಡುಹಗಲೇ ವ್ಯಕ್ತಿಯೋರ್ವನನ್ನು ಇಬ್ಬರು ದೊಣ್ಣೆ ಕೋಲಿನಿಂದ ಹೊಡೆದು ಕೊಂದಿದ್ದು ಈ ವೇಳೆ ಅಲ್ಲಿದ್ದ ಸ್ಥಳೀಯರು ಇದನ್ನು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.
ಲಖನೌ: ಉತ್ತರಪ್ರದೇಶದಲ್ಲಿ ಹಾಡುಹಗಲೇ ವ್ಯಕ್ತಿಯೋರ್ವನನ್ನು ಇಬ್ಬರು ದೊಣ್ಣೆ ಕೋಲಿನಿಂದ ಹೊಡೆದು ಕೊಂದಿದ್ದು ಈ ವೇಳೆ ಅಲ್ಲಿದ್ದ ಸ್ಥಳೀಯರು ಇದನ್ನು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.
ಗಾಝಿಯಾಬಾದ್ ನ ಸಂಚಾರಿ ದಟ್ಟಣೆಯ ಪ್ರಮುಖ ರಸ್ತೆಯಲ್ಲೇ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಕೋಲಿನಿಂದ ಹೊಡೆಯುತ್ತಿದ್ದಾಗ ಅಲ್ಲಿದ್ದ ಕೆಲವರು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದರೆ ಮತ್ತೆ ಕೆಲವರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು.
ಮಾರಣಾಂತಿಕವಾಗಿ ಗಾಯಗೊಂಡಿದ್ದ ವ್ಯಕ್ತಿ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ಅಜಯ್ ಎಂದು ಗುರುತಿಸಲಾಗಿದೆ.
ಇನ್ನು ಆರೋಪಿಗಳನ್ನು ಗೋವಿಂದ್ ಹಾಗೂ ಅಮಿತ್ ಎಂದು ಹೇಳಲಾಗಿದೆ. ಈ ಹಿಂದೆ ಅಜಯ್ ಸಹೋದರ ಹಾಗೂ ಗೋವಿಂದ್ ನಡುವೆ ಹೂವಿನ ಅಂಗಡಿ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು. ಇದೇ ವಿಚಾರಕ್ಕೆ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು ಕೊಲೆ ಪ್ರಕರಣ ಸಂಬಂಧ ಮೂರು ಗಂಟೆಯಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.