ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮುಂಬೈ ಚರ್ಚ್'ಬಳಿ ಪ್ರಾರ್ಥಿಸುತ್ತಿರುವ ಮಹಿಳೆ. 
ದೇಶ

ರೂಪಾಂತರಿ ಕೊರೋನಾ ಆತಂಕ: ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೂ ಲಾಕ್ಡೌನ್ ನಿರ್ಬಂಧ ವಿಸ್ತರಣೆ

ರೂಪಾಂತರಿ ಕೊರೋನಾ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ. 

ಮುಂಬೈ: ರೂಪಾಂತರಿ ಕೊರೋನಾ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ. 

ಕೋವಿಡ್-19 ವೈರಸ್ ಹರಡುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್‌ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. 

ಕಳೆದ ತಿಂಗಳುಗಳಿಂದ ಮಹಾರಾಷ್ಟ್ರ ಸರ್ಕಾರ ಕೆಲವು ವಲಯಗಳ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿತ್ತು. ಧಾರ್ಮಿಕ ಸ್ಥಳಗಳಿಗೆ ಜನರು ತೆರಳು ಕೆಲ ತಿಂಗಳ ಹಿಂದಷ್ಟೇ ಅನುಮತಿ ನತೀಡಿತ್ತು. 9-12ನೇ ತರಗತಿ ಮಕ್ಕಳು ಶಾಲೆ-ಕಾಲೇಜುಗಳಿಗೆ ತೆರಳಲು ಅವಕಾಶ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ