ದೇಶ

ಕೋವಿಡ್-19: ದೇಶದಲ್ಲಿಂದು 20,550 ಕೇಸ್ ಪತ್ತೆ, 286 ಮಂದಿ ಸಾವು

Manjula VN

ನವದೆಹಲಿ: ದೇಶದಲ್ಲಿಂದು 20,550 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 286 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,02,44,853ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,48,439ಕ್ಕೆ ತಲುಪಿದೆ ಎಂದು ತಿಳಿಸಿದೆ. 

ಈ ನಡುವೆ ಒಟ್ಟಾರೆ 1,02,44,853 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 26,572 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,4141ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,62,272 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 7,15,397 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 16,88,18,054 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

SCROLL FOR NEXT