ದೇಶ

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

Lingaraj Badiger

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಅವರು ಬುಧವಾರ ಹೇಳಿದ್ದಾರೆ.

"ತಮಿಳುನಾಡಿನಲ್ಲಿ, ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದಲ್ಲಿ ಅತಿದೊಡ್ಡ ಪಾಲುದಾರ ಪಕ್ಷ. ಹೀಗಾಗಿ ಆ ಪಕ್ಷದವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸಹಜ. ಪ್ರಸ್ತುತ, ಇಕೆ ಪಳನಿಸ್ವಾಮಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎನ್‌ಡಿಎ ಸಮನ್ವಯ ಸಮಿತಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಲಿದೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದಿ. ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜನರ ಸ್ನೇಹಿ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ತಮಿಳುನಾಡನ್ನು ಸಮೃದ್ಧಿಯ ಹೆದ್ದಾರಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಿಟಿ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಳನಿಸ್ವಾಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಐಎಡಿಎಂಕೆ ನಾಯಕ ಒ ಪನ್ನೀರ್ ಸೇಲ್ವಂ ಅವರು ಕಳೆದ ಸೆಪ್ಟೆಂಬರ್ ನಲ್ಲಿ ಘೋಷಿಸಿದ್ದರು.

SCROLL FOR NEXT