ಪ್ರಧಾನಿ ಮೋದಿ ಮಾತುಗಳ ಮೇಲೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರಿಗೆ ಪ್ರಧಾನಿ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರಿಗೆ ಪ್ರಧಾನಿ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್, ಅಸತ್ಯಾಗ್ರಹದ ಇತಿಹಾಸದಿಂದಾಗಿ ಮೋದಿ ಮೇಲೆ ರೈತರಿಗೆ ನಂಬಿಕೆಯಿಲ್ಲ, 50 ದಿನ ಸಮಯ ಕೊಡಿ, ಪ್ರತಿ ವರ್ಷ 2 ಕೋಟಿ
ಉದ್ಯೋಗ ಮತ್ತು ಪ್ರತಿಯೊಬ್ಬರು ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದಾಗಿ ಭರವಸೆ ನೀಡಿದ್ದರು.
21 ದಿನಗಳಲ್ಲಿ ಕೊರೋನಾ ಗೆಲ್ಲುವುದಾಗಿ ಹೇಳಿದ್ದರು, ಹೀಗಾಗಿ ಮೋದಿ ಅವರ ಸುಳ್ಳುಗಳಿಂದಾಗಿ ರೈತರು ಅವರ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಟ್ವೀಟ್
ಮಾಡಿದ್ದಾರೆ. ಭಾರತ ಈಗ ಕಾಲ್ಪನಿಕ ಪ್ರಜಾಪ್ರಭುತ್ವದಲ್ಲಿದೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದರು.