ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 21,821 ಹೊಸ ಕೇಸ್ ಪತ್ತೆ, 299 ಮಂದಿ ಸಾವು

ದೇಶದಲ್ಲಿಂದು 21,821 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 299 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿಂದು 21,821 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 299 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,02,66,674ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,48,738ಕ್ಕೆ ತಲುಪಿದೆ ಎಂದು ತಿಳಿಸಿದೆ. 

ಈ ನಡುವೆ ಒಟ್ಟಾರೆ 1,02,66,674 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 26,139 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 98,60,280ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,57,656 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 11,27,244 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 17,20,49,274 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ