ದೇಶ

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ 

Sumana Upadhyaya

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯುತ್ತಿದ್ದು, ರೈತರ ಪ್ರತಿಭಟನೆ ಮುಂದುವರಿದರೆ ಇಂದಿನ ಪರಿಸ್ಥಿತಿಯಲ್ಲಿ ಕೇರಳದ ಮೇಲೆ ಇದರಿಂದ ಗಂಭೀರ ಪರಿಣಾಮ ಬೀರಲಿದೆ. ಬೇರೆ ರಾಜ್ಯಗಳಿಂದ ಆಹಾರ ವಸ್ತುಗಳು ಪೂರೈಕೆಯಾಗುವುದು ನಿಂತುಹೋದರೆ ಕೇರಳ ರಾಜ್ಯದ ಜನತೆ ಹಸಿವಿನಿಂದ ಬಳಲುವುದರಲ್ಲಿ ಸಂಶಯವೇ ಇಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ವಿಧಾನಸಭೆಯಲ್ಲಿ ಹೇಳಿದರು.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ರೈತರ ವಿರುದ್ಧವಾಗಿದ್ದು ಕಾರ್ಪೊರೇಟ್ ಕಂಪೆನಿಗಳ ಪರವಾಗಿದೆ ಎಂದು ಆರೋಪಿಸಿದರು. 

SCROLL FOR NEXT