ದೇಶ

ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಸಿಆರ್‌ಪಿಎಫ್ ನ ಇಬ್ಬರು ಯೋಧರು, ನಾಲ್ವರು ನಾಗರಿಕರಿಗೆ ಗಾಯ

Srinivas Rao BV

ಶ್ರೀನಗರ: ಭಾನುವಾರ ಇಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ( (ಸಿಆರ್ ಪಿಎಫ್) ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.

ನಗರದ ಹೃದಯಭಾಗದಲ್ಲಿರುವ ಪ್ರೆಸ್ ಎನ್;ಕ್ಲೇವ್ ಎದುರಿನ ಪಾರ್ತಾಬ್ ಪಾರ್ಕ್ ಒಳಗೆ ನಿಯೋಜಿಸಲಾಗಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಅಪರಿಚಿತ ಉಗ್ರರು ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕೃತ ಮೂಲಗಳು ಯುಎನ್ ಐಗೆ ತಿಳಿಸಿವೆ. 
ಗಾಯಗೊಂಡು ಸಿಆರ್ ಪಿಎಫ್ ಯೋಧರನ್ನು ಸಿ ತುಕಡಿಯ 171 ಬೆಟಾಲಿಯನ್ ನ ರವಿ ಬಿಸ್ವಾಸ್ ಮತ್ತು ಎಸ್ ಕೆ ಪಟ್ನಾಯಕ್ ಎಂದು ಗುರುತಿಸಲಾಗಿದ್ದು, ಸ್ಫೋಟದಲ್ಲಿ ನಾಲ್ವರು ನಾಗರಿಕರು ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಫೋಟ ಸಂಭವಿಸುತ್ತಿದ್ದಂತೆ ತಪ್ಪಿಸಿಕೊಳ್ಳುವಲ್ಲಿ ಉಗ್ರರು ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಲಾಗಿದೆ. ದಾಳಿಕೋರರನ್ನು ಬಂಧಿಸಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಸ್ಫೋಟ ನಡೆದ ಸ್ಥಳದ 5 ಕಿ.ಮೀ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ. ಭದ್ರತಾ ಪಡೆಗಳು ವಾಹನಗಳನ್ನು ವಿಶೇಷವಾಗಿ ದ್ವಿಚಕ್ರ ವಾಹನಗಳನ್ನು ವ್ಯಾಪಕವಾಗಿ ತಪಾಸಣೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT