ಮುಖ್ಯಮಂತ್ರಿ ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ ಕೆಲವರಿಗೆ ಪ್ರಚಾರದಲ್ಲಿ ಹೆಚ್ಚಿನ ಆಸಕ್ತಿ- ಕೇಜ್ರಿವಾಲ್ ವಿರುದ್ಧ ನಿತೀಶ್ ವಾಗ್ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವರು ಪ್ರಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ಕಳೆದ ಐದು ವರ್ಷಗಳಲ್ಲಿ ನಗರದ ಅಭಿವೃದ್ಧಿಗಾಗಿ  ಮಾಡಿರುವ ಕೆಲಸವಾದರೂ ಏನು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವರು ಪ್ರಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ಕಳೆದ ಐದು ವರ್ಷಗಳಲ್ಲಿ ನಗರದ ಅಭಿವೃದ್ಧಿಗಾಗಿ  ಮಾಡಿರುವ ಕೆಲಸವಾದರೂ ಏನು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಅಭ್ಯರ್ಥಿ ಎಸ್ ಸಿ ಎಲ್ ಗುಪ್ತಾ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ನಿತೀಶ್ ಕುಮಾರ್, ಕೆಲವರು ಪ್ರಚಾರಕ್ಕಾಗಿ ಹಾತೂರೆಯುತ್ತಿದ್ದಾರೆ ಆದರೆ, ನಾವು ಆ ರೀತಿಯಲ್ಲಿ ಮಾಡಲ್ಲ ಎಂದರು.

ದೆಹಲಿ ಆಡಳಿತಕ್ಕಾಗಿ ಜನಾದೇಶ ಪಡೆದವರು ಏನನ್ನು ಮಾಡಿಲ್ಲ, ಬಿಹಾರ ಬಡ ರಾಜ್ಯವಾಗಿದ್ದರೂ  ಶಿಕ್ಷಣ, ವಿದ್ಯುತ್ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಅದ್ಭುತ ಕೆಲಸ ಮಾಡಿದೆ ಮತ್ತು ರಸ್ತೆ ಮತ್ತು ಸಾರಿಗೆ ಮೂಲಸೌಕರ್ಯಗಳನ್ನು ಬಲಪಡಿಸಿದೆ ಎಂದು ತಿಳಿಸಿದರು. 

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ ಜೆಪಿ ಹಾಗೂ ಜೆಡಿಯು ಮೈತ್ರಿಯೊಂದಿಗೆ ಬಿಜೆಪಿ ಸ್ಪರ್ಧಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಎಲ್ ಜೆಪಿ ಮುಖಂಡ ಚಿರಾಗ್ ಪಾಸ್ವಾನ್ ಸಾರ್ವಜನಿಕ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!