ಅನಂತ್ ಕುಮಾರ್ ಹೆಗ್ಡೆ 
ದೇಶ

ಗಾಂಧಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ  ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್  ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ  ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್  ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

 ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆಯ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಶೋಕಾಸ್ ನೋಟಿಸ್ ನೀಡಿದ್ದು, ಹೆಗ್ಡೆ ಅವರಿಂದ ವಿವರಣೆ ಬಯಸಿದ್ದಾರೆ ಎಂದು ಕಟೀಲ್ ಸುದ್ದಿಸಂಸ್ಥೆಯೊಂದಕ್ಕೆ ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ, ಅಹಿಂಸಾ ಚಳವಳಿ ಹಾಗೂ ಮಹಾತ್ಮ ಗಾಂಧಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು, ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ನೋಡದ, ಏಟು ತಿನ್ನದವರನ್ನು ಹಾಗೂ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಮಂಗಳವಾರ ನಡೆಯಲಿರುವ ಸಂಸದೀಯ ಮಂಡಳಿ ಸಭೆಗೆ ಬರಬಾರದು ಎಂದು ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾ ನಿಶ್ಯಸ್ತ್ರಗೊಳಿಸಿ- ಲೆಬನಾನ್‌ಗೆ ಇಸ್ರೇಲ್ ಎಚ್ಚರಿಕೆ!

'ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ'; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!

ಅಮೆರಿಕಾದ 300 ಮಿಲಿಯನ್ ಡಾಲರ್ ಮೌಲ್ಯದ THAAD ರಡಾರ್ ವ್ಯವಸ್ಥೆ ಇರಾನ್ ದಾಳಿಯಲ್ಲಿ ಧ್ವಂಸ!

TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್

'ನನ್ನ ಮೇಲೆ ಏಕೆ ಕೋಪವಿದೆಯೋ ಗೊತ್ತಿಲ್ಲ': ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಗರಂ ಆಗಿದ್ದೇಕೆ?

SCROLL FOR NEXT