ಸಂಗ್ರಹ ಚಿತ್ರ 
ದೇಶ

ಗುಂಡು ಹಾರಿಸುವುದನ್ನು ನಿಲ್ಲಿಸಿ: ಸಿಎಎ ವಿರುದ್ಧ ಲೋಕಸಭೆಯಲ್ಲಿ ದನಿ ಎತ್ತಿದ ವಿರೋಧ ಪಕ್ಷಗಳು

ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ. 

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ. 

ಲೋಕಶಭೆಯಲ್ಲಿ 2020 ಬಜೆಟ್ ಅಧಿವೇಶನ ನಡೆಸುತ್ತಿದ್ದು, ಅಧಿವೇಶನದ ಪ್ರಶ್ನಾವಳಿ ಅವಧಿಯಲ್ಲಿ ವಿರೋಧ ಪಕ್ಷಗಳ ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆಂದು ವರದಿಗಳು ತಿಳಿಸಿವೆ. 

ಸಿಎಎಗೆ ಬೇಡ ಎನ್ನಿ, ಪ್ರಜಾಪ್ರಭುತ್ವವನ್ನು ಉಳಿಸಿ ಮತ್ತು ನಮ್ಮ ಸಂವಿಧಾನವನ್ನು ರಕ್ಷಿಸಿ ಎಂದು ವಿರೋಧ ಪಕ್ಷಗಳ ನಾಯಕರು ಘೋಷಣೆ ಕೂಗಿದ್ದಾರೆ. ಅಲ್ಲದೆ, ಗೋಲಿ ಮಾರ್ನಾ ಬಂದ್ ಕರೋ, ದೇಶ್ ಕೋ ತೋಡ್ನಾ ಬಂದ್ ಕರೋ (ಗುಂಡು ಹಾರಿಸುವುದನ್ನು  ನಿಲ್ಲಿಸಿ, ದೇಶ ಒಡೆಯುವುದನ್ನು ನಿಲ್ಲಿಸಿ) ಎಂದು ಘೋಷಣೆ ಕೂಗಿದ್ದಾರೆ. 

ಈ ವೇಳೆ ಮಾತನಾಡಿರುವ ಸ್ಪೀಕರ್ ಓಂ ಬಿರ್ಲಾ ಅವರು, ಯುವಕರ ಕೌಶಲ್ಯಾಭಿವೃದ್ಧಿ ಕುರಿತ ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಯುವ ಅಗತ್ಯವಿದ್ದು, ಪ್ರತೀಯೊಬ್ಬರು ತಮ್ಮ ತಮ್ಮ ಸ್ಥಾನಗಳಲ್ಲಿ ಆಸೀನರಾಗಬೇಕೆಂದು ಮನವಿ ಮಾಡಿಕೊಂಡರು. ಅಲ್ಲದೆ, ಪ್ರಶ್ನಾವಳಿ ಅವಧಿ ಸುಸೂತ್ರವಾಗಿ ನಡೆಯುವಂತೆ ಅನುವು ಮಾಡಿಕೊಡುವಂತೆ ಕೇಳಿದರು. ಪ್ರಶ್ನಾವಳಿ ಅವಧಿ ಪೂರ್ಣಗೊಂಡ ಬಳಿಕ ಶೂನ್ಯ ಅವಧಿಯಲ್ಲಿ ಸದಸ್ಯರು ದನಿ ಎತ್ತುವ ವಿಚಾರದ ಬಗ್ಗೆಯೂ ಚರ್ಚೆ ನಡೆಸುವುದಾಗಿ ಇದೇ ವೇಳೆ ಸ್ಪೀಕರ್ ಭರವಸೆ ನೀಡಿದರು. ಆದರೂ ಇದಾವುದ್ಕಕೂ ಜಗ್ಗದ ವಿರೋಧ ಪಕ್ಷಗಳ ನಾಯಕರು ತಮ್ಮ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮುಂದುವರೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT