ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸೋಮವಾರ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ.
‘ಸೇನೆಯ ಚೀತಾ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಉಧಮ್ ಪುರದಿಂದ ತನ್ನ ನಿಗದಿತ ಸ್ಥಳಕ್ಕೆ ಹೊರಟಿತ್ತು. ಆದರೆ, ಮಾರ್ಗದ ಮಧ್ಯೆ ತಾಂತ್ರಿಕ ದೋಷ ಉಂಟಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ರಿಯಾಸಿಯ ಖಾದ್ ಪ್ರದೇಶದ ಸಮೀಪ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಮತ್ತು ಸಹ ಪೈಲಟ್ ಇಬ್ಬರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷವನ್ನು ಸರಿಪಡಿಸಲಾಗುತ್ತಿದೆ. ಈ ವಿಷಯ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.