ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನವದೆಹಲಿ: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಉದರ ಸಂಬಂಧಿ ಸೋಂಕಿನಿಂದಾಗಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ

ಸೋನಿಯಾ ಗಾಂಧಿ
Nagaraja AB
Updated On : 5 Feb 2020, 8:36 pm

ನವದೆಹಲಿ: ಉದರ ಸಂಬಂಧಿ ಸೋಂಕಿನಿಂದಾಗಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ

ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಉದರ ಸಂಬಂಧಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿರವಾಗಿತ್ತು ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ  ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥ ಡಾ. ಡಿ.ಎಸ್. ರತ್ನ ತಿಳಿಸಿದ್ದಾರೆ.

ಅನಾರೋಗ್ಯದ  ಹಿನ್ನೆಲೆಯಲ್ಲಿ ಶನಿವಾರ ನಡೆದ ಕೇಂದ್ರ ಮುಂಗಡ ಪತ್ರ ಮಂಡನೆ ಸಂದರ್ಭದಲ್ಲೂ ಸೋನಿಯಾ ಗಾಂಧಿ ಸಂಸತ್ತಿನಲ್ಲಿ ಪಾಲ್ಗೊಂಡಿರಲಿಲ್ಲ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement