ಕನ್ಹಯ್ಯಾ ಕುಮಾರ್ 
ದೇಶ

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ದಾಳಿ: ಚಾಲಕನಿಗೆ ಗಾಯ

ಸಿಎಎ, ಎನ್ ಪಿಆರ್ ಹಾಗೂ ಎನ್ ಆರ್ ಸಿ ವಿರುದ್ಧ ಬಿಹಾರ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿರುವ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

ಬಿಹಾರ: ಸಿಎಎ, ಎನ್ ಪಿಆರ್ ಹಾಗೂ ಎನ್ ಆರ್ ಸಿ ವಿರುದ್ಧ ಬಿಹಾರ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿರುವ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

ದುಷ್ಕರ್ಮಿಗಳ ಗುಂಪು ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮಾಜಿ ಜೆಎನ್ ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯಾ ಕುಮಾರ್, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದಾಗ್ಯೂ, ಬೆಂಗಾವಲು ವಾಹನವೊಂದು ಹಾನಿಯಾಗಿದ್ದು, ಅದರ ಕಾರು ಚಾಲಕ ಗಾಯಗೊಂಡಿದ್ದಾನೆ ಎಂದು ವಿಶೇಷ ಕಾರ್ಯ ಪಡೆ ಎಸ್ ಪಿ ಸುದೀರ್ ಕುಮಾರ್ ಪೊಕಿರಾ ಹೇಳಿದ್ದಾರೆ.

ಈ ವಾರದಲ್ಲಿ ಇದು ಎರಡನೇ ಘಟನೆಯಾಗಿದೆ. ಫೆಬ್ರವರಿ 1ರಂದು ಸರನ್ ಜಿಲ್ಲೆಯಲ್ಲಿ ಕನ್ಹಯ್ಯಾ ಕುಮಾರ್  ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿತ್ತು .

ಆಡಳಿತ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಆರೋಪಿಸಿದ್ದಾರೆ. ಕನ್ಹಯ್ಯಾ ಕುಮಾರ್ ಪ್ರಚಾರ ಆರಂಭಿಸಿದ ದಿನದಿಂದಲೂ ಅವರೊಂದಿಗೆ ಶಕೀಲ್ ಅಹ್ಮದ್ ಪ್ರಚಾರದಲ್ಲಿ ನಿರತರಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT