ದೇಶ

ಶಾಹೀನ್ ಬಾಗ್ ಶೂಟರ್ ಆಪ್ ಗೆ ಸೇರಿದ್ದರೆ ಡಬಲ್ ಶಿಕ್ಷೆ ಕೊಡಿ: ಅರವಿಂದ್ ಕೇಜ್ರಿವಾಲ್

Lingaraj Badiger

ನವದೆಹಲಿ: ಕಳೆದ ವಾರ ದೆಹಲಿಯ ಶಾಹೀನ್ ಬಾಗ್ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಒಂದು ವೇಳೆ ಆಮ್ ಆದ್ಮಿ ಪಕ್ಷಕ್ಕೆ ಸೇರಿದವರಾಗಿದ್ದರೆ ಅವರಿಗೆ ಡಬಲ್ ಶಿಕ್ಷೆ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿರುವ ದೆಹಲಿ ಸಿಎಂ, ಈ ವಿಚಾರದಲ್ಲಿ ನೀವು ಸಹ ರಾಜಿಮಾಡಿಕೊಳ್ಳಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಾಕರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇದೇ ವೇಳೆ ಅಮಿತ್ ಶಾ ಅವರು ಬಹಿರಂಗ ಚರ್ಚೆಗೆ ಆಹ್ವಾನಿಸಿರುವ ಅರವಿಂದ್ ಕೇಜ್ರಿವಾಲ್ ಅವರು, ಫೆಬ್ರವರಿ 8ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಜನ ಬಿಜೆಪಿ ಏಕೆ ಮತ ಹಾಕಬೇಕು ಎಂಬುದನ್ನು ಅವರು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಎಎ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ 25 ವರ್ಷದ ಕಪಿಲ್ ಗುಜ್ಜರ್ ಗುಂಡು ಹಾರಿಸಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.

ಇನ್ನು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ಎಂದು ದೆಹಲಿ ಪೊಲೀಸರು ಹೇಳಿದ್ದರು.

SCROLL FOR NEXT