'ಉಗ್ರರಿಗೆ ಬಿರಿಯಾನಿ' ಹೇಳಿಕೆ: ಯೋಗಿ ಆದಿತ್ಯನಾಥ್ ಗೆ ಶೋಕಾಸ್ ನೋಟಿಸ್ ನೀಡಿದ ಆಯೋಗ
ಉಗ್ರರಿಗೆ ಬಿರಿಯಾನಿ ಹೇಳಿಕೆ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಇಂದು ಶೋಕಾಸ್ ನೋಟಿಸ್ ನೀಡಿದೆ
ನವದೆಹಲಿ: ಉಗ್ರರಿಗೆ ಬಿರಿಯಾನಿ ಹೇಳಿಕೆ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಇಂದು ಶೋಕಾಸ್ ನೋಟಿಸ್ ನೀಡಿದೆ
ಶುಕ್ರವಾರ ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಯೋಗಿ ಆದಿತ್ಯ ನಾಥ್ ಅವರಿಗೆ ಸೂಚಿಸಲಾಗಿದೆ.
ಯೋಗಿ ಆದಿತ್ಯ ನಾಥ್ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ದೆಹಲಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಫೆಬ್ರವರಿ 1 ರಂದು ಚುನಾವಣಾ ಪ್ರಚಾರದಲ್ಲಿ ಯೋಗಿ ಆದಿತ್ಯ ನಾಥ್ ಈ ಹೇಳಿಕೆ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.