ದೇಶ

ಯಾರೋ ಪ್ರಧಾನಿಯಾಗುವ ಬಯಕೆಯಿಂದ ಭಾರತ ಅಂದು ಇಬ್ಭಾಗವಾಯಿತು: ನೆಹರೂ ವಿರುದ್ಧ ಪ್ರಧಾನಿ ಮೋದಿ ಆರೋಪ 

ನ್ ಡಿಎ ಸರ್ಕಾರ ಅಲ್ಪಸಂಖ್ಯಾತರು ಅದರಲ್ಲೂ ವಿಶೇಷವಾಗಿ ಮುಸ್ಲಿಮ್ ಧರ್ಮದವರ ಮೇಲೆ ತಾರತಮ್ಯವೆಸಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಗುರುವಾರ ತಿರುಗೇಟು ನೀಡಿದ್ದಾರೆ.

ನವದೆಹಲಿ: ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರು ಅದರಲ್ಲೂ ವಿಶೇಷವಾಗಿ ಮುಸ್ಲಿಮ್ ಧರ್ಮದವರ ಮೇಲೆ ತಾರತಮ್ಯವೆಸಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಗುರುವಾರ ತಿರುಗೇಟು ನೀಡಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಮೋದಿ, ಜವಹರಲಾಲ್ ನೆಹರೂ, ಭಾರತ ವಿಭಜನೆ, ತುರ್ತು ಪರಿಸ್ಥಿತಿ ಮತ್ತು 1984ರ ಸಿಖ್ ವಿರೋಧಿ ದಂಗೆ ಬಗ್ಗೆ ಪ್ರಸ್ತಾಪಿಸಿದರು.


ಯಾರೋ ಒಬ್ಬರು ಪ್ರಧಾನಿಯಾಗಬೇಕೆಂದು ಆಸೆಯಿಂದ ಭಾರತವನ್ನು ವಿಭಜಿಸಿ ಎರಡು ದೇಶಗಳನ್ನಾಗಿ ಹೋಳು ಮಾಡಿದರು. ದೇಶ ಇಬ್ಭಾಗವಾದ ನಂತರ ಪಾಕಿಸ್ತಾನದಲ್ಲಿ ಹಿಂದೂ, ಸಿಖ್ಖರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರನ್ನು ಯಾವ ರೀತಿ ನೋಡಲಾಯಿತು, ಎಷ್ಟು ಕಿರುಕುಳ ನೀಡಲಾಯಿತು ಎಂದು ಊಹಿಸಲೂ ಅಸಾಧ್ಯ ಎಂದರು.


1950ರಲ್ಲಿ ನೆಹರೂ-ಲಿಯಾಕತ್ ಅಲಿ ಒಪ್ಪಂದ ವೇಳೆ ಪಾಕಿಸ್ತಾನದಲ್ಲಿ ಧರ್ಮ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವುದಿಲ್ಲ ಎಂದು ಒಪ್ಪಂದವಾಗಿತ್ತು. ನೆಹರೂರಂತಹ ಜಾತ್ಯತೀತವಾದಿಗಳು ದೂರದೃಷ್ಟಿ ಹೊಂದಿದ್ದವರು ಆಗ ಏಕೆ ಎಲ್ಲಾ ನಾಗರಿಕರನ್ನು ಒಪ್ಪಂದದಲ್ಲಿ ಪರಿಗಣಿಸಿರಲಿಲ್ಲ? ಇದಕ್ಕೆ ಆಗ ಏನಾದರೊಂದು ಕಾರಣ ಇದ್ದಿರಬಹುದಲ್ಲವೇ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT