ನವದೆಹಲಿ: ನೆಹರು, ಪಾಕಿಸ್ತಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರೆ. ಆದರೆ ಮುಖ್ಯ ವಿಷಯವಾಗಿರುವ ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾತೇ ಆಡುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ನಿರುದ್ಯೋಗದ ಬಗ್ಗೆ ಮಾತನಾಡದೇ ಪ್ರಧಾನಿ ನರೇಂದ್ರ ಮೋದಿ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮಹಾತ್ಮಾ ಗಾಂಧಿ ನಿಮಗೆ ಟ್ರೇಲರ್ ಆಗಿರಬಹುದು, ನಮಗೆ ಜೀವನ ಎಂದಿದ್ದರು.
ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ದೇಶದ ಮುಂದಿರುವ ಅತಿ ದೊಡ್ಡ ವಿಷಯವೆಂದರೆ ಆರ್ಥಿಕತೆ ಹಾಗೂ ನಿರುದ್ಯೋಗ ಆದರೆ ಪ್ರಧಾನಿ ಅದರ ಬಗ್ಗೆ ಮಾತೇ ಆಡಲಿಲ್ಲ ಎಂದು ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.