ಪಿ ಚಿದಂಬರಂ 
ದೇಶ

ಉಮರ್‌, ಮೆಹಬೂಬಾ ಬಂಧನ: ಪ್ರಜಾಪ್ರಭುತ್ವದ ಅತ್ಯಂತ್ಯ ಕೆಟ್ಟ ಅಸಹ್ಯ ನಡವಳಿಕೆ - ಪಿ.ಚಿದಂಬರಂ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ)ಯನ್ನು ಜಾರಿಗೊಳಿಸಿ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡರು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ)ಯನ್ನು ಜಾರಿಗೊಳಿಸಿ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡರು, ಆರೋಪಗಳಿಲ್ಲದೆ ಬಂಧಿಸುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕೆಟ್ಟ ಅಸಹ್ಯ ನಡವಳಿಕೆಯಾಗಿದೆ ಎಂದು ಶುಕ್ರವಾರ ಟೀಕಿಸಿದ್ದಾರೆ.

ಉಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಇತರರ ವಿರುದ್ಧ  ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ನು ಜಾರಿ ಮಾಡಿರುವುದು ಕ್ರೂರ ಆಘಾತ ಮತ್ತು ವಿನಾಶಕಾರಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸರಣಿ ಟ್ವೀಟ್ ಮಾಡಿದ್ದಾರೆ.

ಆರೋಪಗಳಿಲ್ಲದೆ  ಬಂಧಿಸುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕೆಟ್ಟ ಅಸಹ್ಯ ನಡವಳಿಕೆಯಾಗಿದೆ. ಅನ್ಯಾಯದ ಕಾನೂನುಗಳು  ಜಾರಿಗೆ ಬಂದಾಗ ಅಥವಾ ಅನ್ಯಾಯದ ಕಾನೂನುಗಳನ್ನು ಜಾರಿಗೊಳಿಸಿದಾಗ, ಜನರು ಶಾಂತಿಯುತವಾಗಿ  ಪ್ರತಿಭಟಿಸುವುದಕ್ಕಿಂತ ಬೇರೆ ಯಾವ ಆಯ್ಕೆ ಇದೆ? ' ಎಂದು ಮಾಜಿ ಗೃಹ ಸಚಿವರು ಪ್ರಶ್ನಿಸಿದ್ದಾರೆ.

ಅಬ್ದುಲ್ಲಾ ಮತ್ತು ಎಂ.ಎಸ್.ಮುಫ್ತಿ ವಿರುದ್ಧ ಸರ್ಕಾರ ಗುರುವಾರ ಪಿಎಸ್ ಎ ಜಾರಿ ಮಾಡಿದೆ. 1978ರ ಪಿಎಸ್ ಎ ಎಂಬುದು ಜಮ್ಮು ಮತ್ತು ಕಾಶ್ಮೀರ ಕಾನೂನಾಗಿದ್ದು, ವಿಚಾರಣೆಯಿಲ್ಲದೆ ವ್ಯಕ್ತಿಯನ್ನು ಎರಡು  ವರ್ಷಗಳವರೆಗೆ ಬಂಧಿಸಲು ಅಧಿಕಾರಿಗಳಿಗೆ ಅವಕಾಶ ನೀಡುತ್ತದೆ.

ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಸರ್ಕಾರ ರದ್ದುಗೊಳಿಸಿದಾಗಿನಿಂದ ಉಭಯ ನಾಯಕರು ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 107 ರ ಅಡಿಯಲ್ಲಿ ಬಂಧನದಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT