ಮತದಾನಕ್ಕೆ ಸರದಿಯಲ್ಲಿ ನಿಂತಿರುವ ಮತದಾರರು 
ದೇಶ

ದೆಹಲಿ ವಿಧಾನಸಭೆ ಚುನಾವಣೆ: 70 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿ 

ರಾಜಧಾನಿ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆಯೇ ಮತದಾನ ಆರಂಭವಾಗಿ ಪ್ರಗತಿಯಲ್ಲಿದೆ. 1.47 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 672 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ನವದೆಹಲಿ: ರಾಜಧಾನಿ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆಯೇ ಮತದಾನ ಆರಂಭವಾಗಿದೆ.
1.47 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 672 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.


ಮತದಾನ ಆರಂಭವಾದ ಕೆಲ ಹೊತ್ತಿನಲ್ಲಿ ದೆಹಲಿಯ ಯಮುನಾ ವಿಹಾರ್ ಮತ್ತು ಸರ್ದಾರ್ ಪಟೇಲ್ ವಿದ್ಯಾಲಯ ಬೂತ್ ಸಂಖ್ಯೆ 114ರಲ್ಲಿ ತಾಂತ್ರಿಕ ಸಮಸ್ಯೆಯಿಂದ ಮತ ಯಂತ್ರ ಕೆಟ್ಟು ಹೋದ ಪ್ರಸಂಗ ನಡೆಯಿತು. 


 ಪ್ರಮುಖ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೆಳಗ್ಗೆಯೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದರು. ಅವರ ವಿರುದ್ಧ ಕಾಂಗ್ರೆಸ್ ನಿಂದ ರೊಮೇಶ್ ಸಬರ್ ವಾಲ್ ಮತ್ತು ಬಿಜೆಪಿಯಿಂದ ಸುನಿಲ್ ಯಾದವ್ ಸ್ಪರ್ಧಿಸುತ್ತಿದ್ದಾರೆ.


 ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪ್ಪದೆ ತಮ್ಮ ಹಕ್ಕು ಚಲಾಯಿಸುವಂತೆ ಅರವಿಂದ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಮತ್ತೊಂದು ಬಾರಿ ಅಧಿಕಾರದ ಗದ್ದುಗೆ ಏರಲು ಆಪ್ ಕಣ್ಣಿಟ್ಟಿದ್ದು ಪೈಪೋಟಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಇವೆ. ಕಳೆದ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 67 ಕ್ಷೇತ್ರಗಳಲ್ಲಿ ಗೆದ್ದು ಬೀಗಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಕಳೆದ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಎಲ್ಲಾ 7 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ ಈ ಬಾರಿ ಆಮ್ ಆದ್ಮಿ ಪಾರ್ಟಿಯನ್ನು ಸೋಲಿಸಲು ಚುನಾವಣಾ ಪ್ರಚಾರದ ವೇಳೆ ಇನ್ನಿಲ್ಲದ ಪ್ರಯತ್ನ ಮಾಡಿದೆ. 


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಸಹ ಗೆಲ್ಲದಿದ್ದ ಕಾಂಗ್ರೆಸ್ ಈ ಬಾರಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. 2015ರ ವಿಧಾನಸಭೆ ಚುನಾವಣೆಯಲ್ಲಿ ಆಪ್ ಶೇಕಡಾ 54.3, ಬಿಜೆಪಿ ಶೇಕಡಾ 32 ಮತ್ತು ಕಾಂಗ್ರೆಸ್ ಶೇಕಡಾ 9.6ರಷ್ಟು ಒಟ್ಟಾರೆ ಮತ ಗಳಿಸಿತ್ತು. 


ನಾಡಿದ್ದು ಮಂಗಳವಾರ ಫೆಬ್ರವರಿ 11ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT