ಪ್ರೀತಿ ಅಹ್ಲಾವತ್ 
ದೇಶ

ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ: ಗುಂಡಿಟ್ಟು ಮಹಿಳಾ ಎಸ್‍ಐ ಹತ್ಯೆ

ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.

ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.

ಪ್ರೀತಿ ಅಹ್ಲಾವತ್ ಕೊಲೆಯಾದ ಎಸ್‍ಐ. ನಗರದ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರೀತಿ ಅವರನ್ನು ಪೋಸ್ಟ್ ಮಾಡಲಾಗಿತ್ತು. 

ರಾತ್ರಿ ಸುಮಾರು 9.30ಕ್ಕೆ ಈ ಘಟನೆ ಬಗ್ಗೆ ನಮಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಮಗೆ ಕರೆ ಬರುತ್ತಿದ್ದಂತೆ ನಾವು ಸ್ಥಳಕ್ಕೆ ಭೇಟಿ ನೀಡಿದ್ದೆವು. ಈ ವೇಳೆ ಪ್ರೀತಿ ಅವರ ತಲೆಗೆ ಗುಂಡೇಟು ಗಾಯಗಳಾಗಿದೆ.

ನಾವು ಶಂಕಿತರನ್ನು ಗುರುತಿಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಡಿ ಮಿಶ್ರಾ ಹೇಳಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಮೂರು ಖಾಲಿ ಕಾರ್ಟ್ರಿಡ್ಜ್ ಗಳು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ.

ವೈಯಕ್ತಿಕ ದ್ವೇಷದಿಂದ ಆಕೆಯ ಬ್ಯಾಚ್ ಮೇಟ್ ಈ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT