ಹಾರ್ದಿಕ್ ಪಟೇಲ್ 
ದೇಶ

ನನ್ನ ಗಂಡ ಕಾಣೇಯಾಗಿದ್ದಾರೆ ಹುಡುಕಿಕೊಡಿ: ಹಾರ್ದಿಕ್ ಪಟೇಲ್ ಪತ್ನಿ ಕಣ್ಣೀರು!

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟದ  ಕಾಂಗ್ರೆಸ್ ಮುಖಂಡ ಮತ್ತು ಪಾಟಿದಾರ್ ಕೋಟಾ ಆಂದೋನಲದ ಮುಂಚೂಣಿ ನಾಯಕ ಹಾರ್ದಿಕ್ ಪಟೇಲ್ ಕಾಣೇಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಎಂದು ಪತ್ನಿ ಗೋಳಾಡುತ್ತಿದ್ದಾರೆ.

ಅಹಮದಾಬಾದ್: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟದ  ಕಾಂಗ್ರೆಸ್ ಮುಖಂಡ ಮತ್ತು ಪಾಟಿದಾರ್ ಕೋಟಾ ಆಂದೋನಲದ ಮುಂಚೂಣಿ ನಾಯಕ ಹಾರ್ದಿಕ್ ಪಟೇಲ್ ಕಾಣೇಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಎಂದು ಪತ್ನಿ ಗೋಳಾಡುತ್ತಿದ್ದಾರೆ.

2015ರ ದೇಶದ್ರೋಹ ಪ್ರಕರಣದಲ್ಲಿ 2020ರ ಜನವರಿ 18ರಂದು ಹಾರ್ದಿಕ್ ಪಟೇಲ್ ಅವರನ್ನು ಬಂಧಿಸಲಾಗಿದ್ದು ಆ ನಂತರ ಅವರು ಎಲ್ಲಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಪತ್ನಿ ಕಿಂಜಲ್ ಹೇಳಿದ್ದಾರೆ. 

2015ರ ಪಾಟಿದಾರ್ ಕೋಟಾ ಆಂದೋಲನದ ವೇಳೆ ಹಾರ್ದಿಕ್ ಪಟೇಲ್ ದೇಶದ್ರೋಹದ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜನವರಿ 18ರಂದು ಬಂಧಿಸಲಾಗಿತ್ತು. ಇನ್ನು ಇಲ್ಲಿಯ ನ್ಯಾಯಾಲಯವು ವಿಚಾರಣೆಯ ಸಮಯದಲ್ಲಿ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

ನಾಲ್ಕು ದಿನಗಳ ನಂತರ ಹಾರ್ದಿಕ್ ಪಟೇಲ್ ಗೆ ಜಾಮೀನು ನೀಡಲಾಯಿತು. ಇದಾದ ಬೆನ್ನಲ್ಲೇ ಪಠಾನ್ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ ದಾಖಲಾದ ಇತರ ಎರಡು ಪ್ರಕರಣಗಳ ಸಂಬಂಧ ಮತ್ತೆ ಅವರನ್ನು ಪೊಲೀಸರು ಬಂಧಿಸಿದ್ದರು. ಜನವರಿ 24ರಂದು ಈ ಎರಡು ಪ್ರಕರಣಗಳ ಸಂಬಂಧ ಜಾಮೀನು ಸಿಕ್ಕಿತ್ತು. 

ನಂತರ ವಿಚಾರಣೆಗೆ ಹಾಜರಾಗದ ಕಾರಣ ವಿಚಾರಣಾ ನ್ಯಾಯಾಲಯ ಫೆಬ್ರವರಿ 7ರಂದು ಮತ್ತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಇನ್ನು ಪೊಲೀಸರು ಮನೆಯ ಹತ್ತಿರ ಬಂದು ಹಾರ್ದಿಕ್ ಪಟೇಲ್ ಎಲ್ಲಿದ್ದಾನೆ ಎಂದು ನಮ್ಮನ್ನೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

2015ರ ಪಾಟಿದಾರ್ ಕೋಟಾ ಆಂದೋಲನದ ರೂವಾರಿಯಾಗಿದ್ದ ಪಟೇಲ್ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT