ದೇಶ

ದೆಹಲಿಯಲ್ಲಿ ಕಾಂಗ್ರೆಸ್ 'ಶೂನ್ಯ' ಸಾಧನೆ: ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ರಾಜಿನಾಮೆ

Vishwanath S

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಅಲ್ಲಿನ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಚೋಪ್ರಾ ರಾಜೀನಾಮೆ ನೀಡಿದ್ದಾರಾದರೂ, ಪಕ್ಷದ ಹೈಕಮಾಂಡ್ ಇನ್ನೂ ರಾಜೀನಾಮೆ ಅಂಗೀಕರಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷದ ಅಕ್ಟೋಬರ್ ನಲ್ಲಿ ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚೋಪ್ರಾ ಅವರನ್ನು ಮೂರನೇ ಬಾರಿಗೆ ನೇಮಕ ಮಾಡಲಾಗಿತ್ತು.

SCROLL FOR NEXT