ದೆಹಲಿಯಲ್ಲಿ ಆಪ್ ಆರ್ಭಟ: ಗೆಲುವಿನ ನಿರೀಕ್ಷೆಯಲ್ಲಿ ಕೇಜ್ರಿವಾಲ್ ಪಕ್ಷ
ಇಡೀ ರಾಷ್ಟ್ರ ಕುತುಹೂಲದಿಂದ ಎದುರು ನೋಡುತ್ತಿರುವ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಆಪ್ ಆರ್ಭಟ ಮುಂದುವರೆದಿದೆ.
ನವದೆಹಲಿ: ಇಡೀ ರಾಷ್ಟ್ರ ಕುತುಹೂಲದಿಂದ ಎದುರು ನೋಡುತ್ತಿರುವ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಆಪ್ ಆರ್ಭಟ ಮುಂದುವರೆದಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಆಮ್ ಆದ್ಮಿ ಪಕ್ಷ 53, ಬಿಜೆಪಿ 15 , ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 11 ಗಂಟೆ ಹೊತ್ತಿಗೆ ಇಡೀ ಚಿತ್ರಣ ದೊರೆಯುವ ಸಾಧ್ಯತೆ ಇದೆ.
ಬಹುತೇಕ ಚುನಾವಣಾ ಪೂರ್ವ ಸಮೀಕ್ಷೆಗಳು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಕೇಜ್ರಿವಾಲ್ ಪಕ್ಷ ಗೆಲುವಿನ ನಿರೀಕ್ಷೆಯಲ್ಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.