ಅಮಾನತುಲ್ಲಾ ಖಾನ್ 
ದೇಶ

ಶಾಹೀನ್ ಬಾಗ್ ಎಫೆಕ್ಟ್? ಶೇ. 80 ರಷ್ಟು ಮತ ಗಳಿಸಿದ ಅಮಾನತುಲ್ಲಾ ಖಾನ್

ದೆಹಲಿ ವಿಧಾನಸಭೆ ಚುನಾವಣೆ ವೇಳೆ ಅತಿ ಹೆಚ್ಚು ಸುದ್ದಿ ಮಾಡಿದ ಶಾಹೀನ್ ಬಾಗ್, ಓಕ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಮಾನತುಲ್ಲಾ ಖಾನ್ ಅವರು ಶೇ.80 ರಷ್ಟು ಮತ ಗಳಿಸುವ ಮೂಲಕ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ವೇಳೆ ಅತಿ ಹೆಚ್ಚು ಸುದ್ದಿ ಮಾಡಿದ ಶಾಹೀನ್ ಬಾಗ್, ಓಕ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಮಾನತುಲ್ಲಾ ಖಾನ್ ಅವರು ಶೇ.80 ರಷ್ಟು ಮತ ಗಳಿಸುವ ಮೂಲಕ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೂರನೇ ಸುತ್ತಿನಲ್ಲಿ ಸ್ವಲ್ಪ ಹಿನ್ನಡೆ ಅನುಭವಿಸಿದ್ದ ಅಮಾನತುಲ್ಲಾ ಖಾನ್ ಅವರು ನಂತರ ಭರ್ಜರಿ ಮುನ್ನಡೆಯೊಂದಿಗೆ 13ನೇ ಸುತ್ತಿನ ನಂತರ 72 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಬ್ರಹಮ್ ಸಿಂಗ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.

46 ವರ್ಷದ ಅಮಾನತುಲ್ಲಾ ಖಾನ್ ಅವರು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಪದವಿಧರರಾಗಿದ್ದು, ಗೆಲುವು ಬಹುತೇಕ ಖಚಿತವಾಗಿದೆ.

ಸುಮಾರು 2 ತಿಂಗಳಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಫೆಬ್ರವರಿ 8ರಂದು ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಓಕ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಶೇ. 58.84ರಷ್ಟು ಮತದಾನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT