ದೇಶ

ಜಮ್ಮುವಿನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

Manjula VN

ಜಮ್ಮು: ಜಮ್ಮುವಿನ ಗೊಲೆಪುಲ್ಲಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಹಲವಾರು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಘಟನೆ ಬುಧವಾರ ನಡೆದಿದೆ. 

ಕಟ್ಟಡದ ನೆಲ ಮಹಡಿಯಲ್ಲಿ ಮರಗಳನ್ನು ಯಂತ್ರಗಳಿಂದ ಕತ್ತರಿಸುವ ಕಾರ್ಖಾನೆಯಿದ್ದು, ಕಾರ್ಖಾನೆಯಲ್ಲಿ ಹಲವು ಮಂದಿ ಕಾರ್ಯನಿರ್ವಹಿಸುತ್ತಿದ್ದರು. ಇದರಂತೆ ಕಟ್ಟಡ ಕುಸಿದು ಬಿದ್ದ ಪರಿಣಾಮ ಹಲವು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. 

ಇನ್ನು ಕಟ್ಟಡ ಕುಸಿದುಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಘಟನೆಯಲ್ಲಿ ಅಗ್ನಿಶಾಮಕದ ದಳದ ಸಿಬ್ಬಂದಿಗಳೂ ಕೂಡ ಸಿಲುಕಿಕೊಂಡಿದ್ದಾರೆಂದು ಹೇಳಲಾಗುತ್ತಿದ್ದು. ಇದೀಗ ರಕ್ಷಣಾ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಕೆಲ ನಾಗರೀಕರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇಂದು ಬೆಳಿಗ್ಗೆ 4.48ರ ಸುಮಾರಿಗೆ ಕಟ್ಟಡ ಕುಸಿದಿರುವ ಸುದ್ದಿ ಬಂದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭ ಮಾಡಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT