ದೇಶ

ಮಹಾ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್: ಫೆ.29ರಿಂದ ವಾರದಲ್ಲಿ 5 ದಿನ ಕೆಲಸ ಪದ್ದತಿ ಜಾರಿ

Lingaraj Badiger

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಫೆಬ್ರವರಿ 29 ರಿಂದ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ. 

ಮಹಾರಾಷ್ಟ್ರದಲ್ಲಿ ಸರ್ಕಾರಿ ನೌಕರರು ಈಗ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುತ್ತಿದ್ದು, ಫೆಬ್ರವರಿ 29ರಿಂದ ಐದು ದಿನ ಮಾತ್ರ ಕೆಲಸ ಮಾಡಲಿದ್ದಾರೆ. 

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ಸಭೆ ಇಂದು ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯದ 20 ಲಕ್ಷ ಸರ್ಕಾರಿ ನೌಕರರು ಪ್ರತಿ ಶನಿವಾರ ಹಾಗೂ ಭಾನುವಾರ ರಜೆ ಪಡೆಯಲಿದ್ದಾರೆ.

SCROLL FOR NEXT