ದೇಶ

ಓಮರ್ ಗೃಹಬಂಧನ: ವಿಚಾರಣೆಯಿಂದ ಹಿಂದಕ್ಕೆ ಸರಿದ ನ್ಯಾಯಮೂರ್ತಿ ಶಾಂತನಗೌಡರ್

Manjula VN

ನವದೆಹಲಿ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಗೃಹ ಬಂಧನದಲ್ಲಿಟ್ಟಿರುವ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. 

ಓಮರ್ ಅಬ್ದುಲ್ಲ ಸಹೋದರಿ ಸಾರಾ ಅಬ್ದುಲ್ಲ ಪೈಲಟ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಬುಧವಾರ ನ್ಯಾಯಮೂರ್ತಿ ಎನ್. ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. 

ವಿಚಾರಣೆ ವೇಳೆ ನ್ಯಾಯಮೂರ್ತಿ ಶಾಂತನಗೌಡರ್ ತಾವು ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದರು. ಆದ್ದರಿಂದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಯಿತು. 

ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಓಮರ್ ಅಬ್ದುಲ್ಲ ಅವರನ್ನು ಗೃಹಬಂಧದಲ್ಲಿರಿಸಲಾಗಿದೆ. ಅವರನ್ನು ಅಕ್ರಮವಾಗಿ ಬಂಧನದಲ್ಲಿರಿಸಿದ್ದಾರೆ ಎಂದು ಆರೋಪಿ ಸಹೋದರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

SCROLL FOR NEXT