ಸುಪ್ರೀಂ ಕೋರ್ಟ್ 
ದೇಶ

ಚುನಾಯಿತರಾದ 48 ಗಂಟೆಗಳೊಳಗೆ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ಪ್ರಕಟಿಸಿ: ರಾಜಕೀಯ ಪಕ್ಷಗಳಿಗೆ 'ಸುಪ್ರೀಂ' ಆದೇಶ

ವಿಧಾನಸಭೆ ಮತ್ತು ಸಂಸತ್  ಚುನಾವಣೆಗಳಲ್ಲಿ ಚುನಾಯಿತರಾಗುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ದಾಖಲೆಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.  

ನವದೆಹಲಿ: ವಿಧಾನಸಭೆ ಮತ್ತು ಸಂಸತ್  ಚುನಾವಣೆಗಳಲ್ಲಿ ಚುನಾಯಿತರಾಗುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ದಾಖಲೆಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
  
ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳೇನು ಎಂಬ ವಿವರಗಳನ್ನು ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ನ್ಯಾಯಮೂರ್ತಿ ಫಾಲಿ ಎಸ್ ನಾರಿಮನ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದೆ. 
  
ಈ ಕುರಿತು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ, ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.  
  
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಪರಾಧ ಪೂರ್ವಾಪರಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯ  2018 ರ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪಿನ ನಿರ್ದೇಶನಗಳನ್ನು ರಾಜಕೀಯ ಪಕ್ಷಗಳು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ