ರಾಜೀವ್ ಬನ್ಸಾಲ್ 
ದೇಶ

ರಾಜೀವ್ ಬನ್ಸಾಲ್ ಏರ್ ಇಂಡಿಯಾದ ನೂತನ ವ್ಯವಸ್ಥಾಪಕ ನಿರ್ದೇಶಕ!

ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ನೂತನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐ ಎ ಎಸ್ ಅಧಿಕಾರಿ ರಾಜೀವ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ನೂತನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐ ಎ ಎಸ್ ಅಧಿಕಾರಿ ರಾಜೀವ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ.

1998 ನೇ ಬ್ಯಾಚ್ ಐ ಎ ಎಸ್ ಅಧಿಕಾರಿ ಬನ್ಸಾಲ್ ಪ್ರಸ್ತುತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಏರ್ ಇಂಡಿಯಾ ಮುಖ್ಯಸ್ಥರಾಗಿ ಬನ್ಸಾಲ್ ನೇಮಕಕ್ಕೆ ಸಂಪುಟ ನೇಮಕ ಸಮಿತಿ ಗುರುವಾರ ಅನುಮೋದನೆ ನೀಡಿದೆ.

2019 ರ ಫೆಬ್ರವರಿ 13 ರಂದು ಎರಡನೇ ಬಾರಿಗೆ ಮುಖ್ಯಸ್ಥರಾಗಿ ಅಶ್ವಾನಿ ಲೋಹಾನಿ ನೇಮಕವಾಗಿದ್ದರು. ಇದೀಗ ಬನ್ಸಾಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಏರ್ ಇಂಡಿಯಾದಿಂದ ಬಂಡವಾಳ ಹಿಂತೆಗೆತದ ಪ್ರಕ್ರಿಯೆ ನಡುವೆಯೂ ಉನ್ನತ ಹುದ್ದೆಗಳಲ್ಲಿ ಬದಲಾವಣೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT