ದೇಶ

ಪುಲ್ವಾಮಾ ಹುತಾತ್ಮರನ್ನು ದೇಶ ಎಂದಿಗೂ ಮರೆಯುವುದಿಲ್ಲ: ಪ್ರಧಾನಿ ಮೋದಿ

Lingaraj Badiger

ನವದೆಹಲಿ: ಪುಲ್ವಾಮಾದಲ್ಲಿ ಒಂದು ವರ್ಷದ ಹಿಂದೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಹುತಾತ್ಮರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೌರವ ಸಲ್ಲಿಸಿದರು.
 
"ಕಳೆದ ವರ್ಷ ಭೀಕರವಾದ ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ಗೌರವ"  ಈ ಯೋಧರು ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಹುತಾತ್ಮತೆಯನ್ನು ಎಂದಿಗೂ ಮರೆಯುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
  
ಫೆಬ್ರವರಿ 14, 2019 ರಂದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40ಕ್ಕೂ ಹೆಚ್ಚು ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದರು. ಇದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು.
 
ತರುವಾಯ, ಫೆಬ್ರವರಿ 26 ರಂದು, ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.

SCROLL FOR NEXT