ದೇಶ

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ

Srinivasamurthy VN

1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ  ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಗಲಭೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಗೆ  ಜೈಲು ಶಿಕ್ಷೆ ವಿಧಿಸಲಾಗಿದ್ದು, ಪ್ರಸ್ತುತ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಹೋಳಿ ರಜೆಯ ನಂತರ ಜಾಮೀನು ಅರ್ಜಿಯನ್ನು  ಸುಪ್ರೀಂ ಕೊರ್ಟ್ ಆಲಿಸಲಿದೆ.

"ಹೋಳಿ ರಜೆಯ ನಂತರ ಸಜ್ಜನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಆಲಿಸಲಾಗುವುದು” ಎಂದು ಸಿಜೆಐ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಹೇಳಿದೆ. ನ್ಯಾಯಾಲಯಕ್ಕೆ ವೈದ್ಯಕೀಯ ವರದಿಯನ್ನು ಹಸ್ತಾಂತರಿಸುವ ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್, ಜೈಲಿನಲ್ಲಿ ಕುಮಾರ್ 13 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
 
1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

SCROLL FOR NEXT