ದೇಶ

ಜಾಮಿಯಾ ವಿ.ವಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ ಸಮಿತಿ 

Sumana Upadhyaya

ನವದೆಹಲಿ: ಕಳೆದ ಡಿಸೆಂಬರ್ 15ರಂದು ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಅರೆಸೇನಾಪಡೆ ಮತ್ತು ಪೊಲೀಸ್ ಸಿಬ್ಬಂದಿಗಳು ಹಲ್ಲೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳನ್ನೊಳಗೊಂಡ ಜಾಮಿಯಾ ಸಮನ್ವಯ ಸಮಿತಿ ಭಾನುವಾರ ಬೆಳಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.


ವಿಡಿಯೊ ತಮ್ಮ ಕೈ ಸೇರಿದ್ದು ಈಗ ನಡೆಯುತ್ತಿರುವ ತನಿಖೆಯ ಭಾಗವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ತನಿಖೆ ಮಾಡುತ್ತೇವೆ ಎಂದು ವಿಶೇಷ ಪೊಲೀಸ್ ಆಯುಕ್ತ(ಗುಪ್ತಚರ) ಪ್ರವೀಣ್ ರಂಜನ್ ತಿಳಿಸಿದ್ದಾರೆ.


ಸಮಿತಿ ಬಿಡುಗಡೆ ಮಾಡಿರುವ 48 ಸೆಕೆಂಡ್ ಗಳ ವಿಡಿಯೊದಲ್ಲಿ ಏಳರಿಂದ ಎಂಟು ಅರೆಸೇನಾಪಡೆ ಮತ್ತು ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದ ಹಳೆ ಅಧ್ಯಯನ ಕೊಠಡಿಯನ್ನು ಪ್ರವೇಶಿಸಿ ಲಾಠಿಯಿಂದ ವಿದ್ಯಾರ್ಥಿಗಳಿಗೆ ಹೊಡೆಯುತ್ತಿದ್ದಾರೆ. 


ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಳೆದ ವರ್ಷ ಡಿಸೆಂಬರ್ 15ರಂದು ವಿಶ್ವವಿದ್ಯಾಲಯದ ಆವರಣ ಪ್ರವೇಶಿಸಿದ ಪಾರಾ ಮಿಲಿಟರಿ ಮತ್ತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದರು. ಗ್ರಂಥಾಲಯದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ವಿನಾಕಾರಣ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

SCROLL FOR NEXT